alex Certify ಮತ್ತೆ ಒಂದಾದ್ರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಐದು ದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಒಂದಾದ್ರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಐದು ದಂಪತಿ

ತುಮಕೂರು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ 5 ದಂಪತಿ ಮತ್ತೆ ಒಂದಾಗಿದ್ದಾರೆ. ತುಮಕೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ್ ಅದಾಲತ್ ನಲ್ಲಿ ತಮ್ಮ ಮನಸ್ತಾಪಗಳನ್ನು ಬದಿಗಿಟ್ಟ ದಂಪತಿ ಮತ್ತೆ ಒಂದಾಗಿದ್ದು, ಕುಟುಂಬದ ಸದಸ್ಯರು ಸ್ನೇಹಿತರ ಸಂತಸಕ್ಕೆ ಕಾರಣವಾಗಿದೆ.

ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿಗಳು ನ್ಯಾಯಾಧೀಶರು ಮತ್ತು ವಕೀಲರ ಸಲಹೆಯಂತೆ ತಮ್ಮ ವಿವಾಹ ವಿಚ್ಛೇದನದ ಅರ್ಜಿಗಳನ್ನು ಹಿಂಪಡೆದುಕೊಂಡು ಹಾರ ಬದಲಿಸಿಕೊಳ್ಳುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ತುಮಕೂರು ಜಿಲ್ಲಾ ನ್ಯಾಯಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರು ದಂಪತಿ ಲೋಕ ಅದಾಲತ್ ನಲ್ಲಿ ಒಂದಾಗಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕೌಟುಂಬಿಕ ನ್ಯಾಯಾಧೀಶ ಎನ್. ಮುನಿರಾಜು, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಆಡಳಿತಾಧಿಕಾರಿ ನರಸಿಂಹಪ್ಪ, ಆಡಳಿತ ಶಿರಸ್ತೆದಾರ್ ಎಂ.ಕೆ. ಜಗದೀಶ್ ಮೊದಲಾದವರು ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...