ರಾಮನಗರ: ಡಿ.ಕೆ. ಸಹೋದರರ ದಬ್ಬಾಳಿಕೆ ಮತ್ತು ಧಮ್ಕಿಗೆ ಹೆದರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಹುಜನ ಸಮಾಜವಾದಿ ಪಕ್ಷ(ಬಿ.ಎಸ್.ಪಿ.) ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದ್ದಾರೆ.
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೈ ವೋಲ್ಟೇಜ್ ಕಣವಾಗಿ ಗುರುತಿಸಿಕೊಂಡಿದೆ. ಶತಾಯಗತಾಯ ಗೆಲುವು ಸಾಧಿಸಲೇಬೇಕೆಂದು ಡಿ.ಕೆ. ಸುರೇಶ್ ಹಠಕ್ಕೆ ಬಿದ್ದಿರುವ ಕಾರಣ ವಾಮಮಾರ್ಗದಲ್ಲಿ ಅಭ್ಯರ್ಥಿಗಳ ನಾಮಪತ್ರ ವಾಪಸ್ ತೆಗೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಿತೂರಿಯಿಂದಾಗಿ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಸಹೋದರರ ಧಮ್ಕಿಗೆ ಹೆದರಿ ಬಿಎಸ್ಪಿ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಹೇಳಿದ್ದಾರೆ.