alex Certify ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಡಿಕೆಶಿ ಷಡ್ಯಂತ್ರ : ಯತ್ನಾಳ್ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಡಿಕೆಶಿ ಷಡ್ಯಂತ್ರ : ಯತ್ನಾಳ್ ಹೊಸ ಬಾಂಬ್

ವಿಜಯಪುರ : ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಡಿ.ಕೆ. ಶಿವಕುಮಾರ್ ಷಡ್ಯಂತ್ರ ನಡೆಸಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ನಲ್ಲೇ ದೊಡ್ಡ ಷಡ್ಯಂತ್ರ ನಡೆದಿದೆ. ಅದಕ್ಕಾಗಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಓಡಾಡುತ್ತಿದ್ದಾರೆ.  ಡಿ.ಕೆ. ಶಿವಕುಮಾರ್ ಪರ 70 ಶಾಸಕರು, ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಎನ್ನುತ್ತಿದ್ದಾರೆ ಎಂದರು.

ಸಚಿವರಾದ ಜಮೀರ್ ಅಹ್ಮದ್ ಖಾನ್, ಎಂ.ಬಿ.ಪಾಟೀಲ್, ರಾಜಣ್ಣ ಅವರು ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎನ್ನುತ್ತಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...