ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿಳಂಬ ಖಂಡಿಸಿ ಬಿಜೆಪಿ ನಾಯಕರು ನಡೆಸುತ್ತಿರುವ ಪ್ರತಿಭಟನೆ ವಿಚಾರ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ಜನ ಬಿಜೆಪಿಯವರಿಗೆ ವಿಶ್ರಾಂತಿ ಪಡೆಯಲು ಮನೆಗೆ ಕಳುಹಿಸಿದ್ದಾರೆ. ಹಾಗಾಗಿ ಅವರು ವಿಶ್ರಾಂತಿ ಪಡೆಯಲಿ ಅದನ್ನು ಬಿಟ್ಟು ಅನಗತ್ಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರು ಪ್ರತಿಭಟನೆ ಮಾಡಲಿ. ಅವರು ಎನೇ ಮಾಡಿದರೂ ನಮ್ಮ ಯೋಜನೆಗಳಿಗೆ ಹೆಚ್ಚಿನ ಪ್ರಚಾರ ಸಿಗುತ್ತದೆ ಎಂದರು.
ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಬೇಕು. ಅಕ್ಕಿ ದಾಸ್ತಾನು ಇದ್ದರೂ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡಲು ಕೇಂದ್ರ ನಿರಾಕರಿಸಿದೆ. ಮೊದಲು ಬಿಜೆಪಿಯವರು ಈ ಬಗ್ಗೆ ಪ್ರತಿಭಟನೆ ಮಾಡಬೇಕು ಎಂದು ಹೇಳಿದರು.