
ಬೆಂಗಳೂರು: ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಒಟ್ಟಿಗೆ 2- 3 ತಿಂಗಳ ಹಣ ಖಾತೆಗೆ ಜಮಾ ಮಾಡಲಾಗುವುದು.
ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗದ ಕುರಿತಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಯಾವುದೇ ಹಣಕಾಸಿನ ಸಮಸ್ಯೆ ಇಲ್ಲ. ಎರಡು ಮೂರು ತಿಂಗಳಿಂದ ವಿಳಂಬವಾಗಿದೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ತಿಂಗಳು ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಒಟ್ಟಿಗೆ ಎರಡು ಮೂರು ತಿಂಗಳ ಹಣವನ್ನು ಖಾತೆಗಳಿಗೆ ಜಮಾ ಮಾಡಲಾಗುವುದು. ವಿರೋಧ ಪಕ್ಷಗಳು ಮಾತ್ರ ನಮ್ಮ ವಿರುದ್ಧ ಮಾತನಾಡುತ್ತಿವೆ. ಜನರಿಗೆ ನಮ್ಮ ಸರ್ಕಾರದ ಮೇಲೆ ನಂಬಿಕೆ, ವಿಶ್ವಾಸವಿದೆ ಎಂದು ಹೇಳಿದ್ದಾರೆ.