ರಾಮನಗರ: ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಆ್ಯಪ್ ಸಿದ್ಧಪಡಿಸಲಾಗಿದೆ. ನೋಂದಣಿಗೆ ಸ್ವಯಂಸೇವಕರನ್ನು ಬಳಸಿಕೊಳ್ಳಲು ಯೋಜಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಯೋಜನೆ ಜಾರಿಗೊಳಿಸುವ ಕುರಿತಾಗಿ ಮಂಗಳವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಗ್ಯಾರಂಟಿ ಯೋಜನೆಗಳ ನೋಂದಣಿ ಉಚಿತವಾಗಿದ್ದು, ಯಾರಾದರೂ ಲಂಚ ಕೇಳಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದ್ದಾರೆ.
ಪ್ರತಿ ಎರಡು ಮೂರು ಪಂಚಾಯಿತಿಗಳಿಗೆ ಒಂದು ಡೆಲ್ಲಿ ಪಬ್ಲಿಕ್ ಶಾಲೆ, ನವೋದಯ ಮಾದರಿ ಶಾಲೆ ತೆರೆಯಬೇಕೆಂಬ ಕನಸಿದ್ದು, ಮೊದಲು ರಾಮನಗರದಲ್ಲಿ ಆರಂಭಿಸಿ ನಂತರ ರಾಜ್ಯಕ್ಕೆ ವಿಸ್ತರಿಸಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.