ಕಲಬುರಗಿ: ಲೋಕಸಭೆ ಚುನಾವಣೆ ಬಳಿಕ ಬಿಜೆಪಿಯಲ್ಲಿ ಜೆಡಿಎಸ್ ವಿಲೀನವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಡಿಸಿಎಂ, ಚುನಾವಣೆ ಬಳಿಕ ಜೆಡಿಎಸ್ ವಿಲೀನವಾಗದಿದ್ದರೆ ಬಿಜೆಪಿಯವರೇ ಓಡಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಕ್ಷೀಪ್ರ ಬೆಳವಣಿಗೆಗಳಾಗಲಿವೆ ಎನ್ನುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಹಾಗೇನೂ ಆಗುವುದಿಲ್ಲ. ಒಂದು ವೇಳೆ ಏನಾದರೂ ಆದರೆ ಬಿಜೆಪಿ, ಜೆಡಿಎಸ್ ಮೈತ್ರಿ ಮುರಿದು ಬೀಳುತ್ತದೆ. ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಜೆಡಿಎಸ್ ಬಿಜೆಪಿಯಲ್ಲಿ ವಿಲೀನ ಆಗಲಿದೆ. ಒಂದು ವೇಳೆ ವಿಲೀನವಾಗದಿದ್ದರೆ ಬಿಜೆಪಿಯವರೇ ಜೆಡಿಎಸ್ ನವರನ್ನು ದೂರ ಓಡಿಸುತ್ತಾರೆ ಎಂದು ಹೇಳಿದ್ದಾರೆ.