ಮೈಸೂರು: ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಆದೇಶ ನೀಡಿದೆ. ತಮಿಳುನಾಡಿನ ಡ್ಯಾಮ್ ನಲ್ಲಿ ಎಷ್ಟು ನೀರಿದೆ ಎಂದು ಮಾಹಿತಿ ಪಡೆದಿದ್ದಾರೆ ಎಂದು ಮೈಸೂರಿನಲ್ಲಿ ಜಲ ಸಂಪನ್ಮೂಲ ಇಲಾಖೆ ಸಚಿವರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕದ ಜಲಾಶಯಗಳಿಗೆ 7-10 ಸಾವಿರ ಕ್ಯುಸೆಕ್ ಒಳಹರಿವು ಇದೆ. ನಮ್ಮ ರೈತರ ರಕ್ಷಣೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದೇವೆ. ಬಿಳಿಗುಂಡ್ಲು ಜಲಮಾಪನ ಕೇಂದ್ರಕ್ಕೆ ಎರಡು ದಿನ ಕಡಿಮೆ ನೀರು ಹೋಗಿದೆ. ಬೆಂಗಳೂರಿನಲ್ಲಿ ಮಳೆಯಾದ ಕಾರಣ ಅದು ಬ್ಯಾಲೆನ್ಸ್ ಆಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮನದಟ್ಟು ಮಾಡಿ ಕೊಟ್ಟಿದ್ದೇವೆ. ಏನೇ ಆದೇಶ ಬಂದರೂ ನಮ್ಮ ರೈತರ ಹಿತ ಕಾಯುತ್ತೇವೆ ಎಂದು ಹೇಳಿದ್ದಾರೆ.