ಚಿತ್ರದುರ್ಗ: ಸಚಿವ ಶ್ರೀರಾಮುಲು ಪ್ರತಿನಿಧಿಸುತ್ತಿರುವ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಪೈಪೋಟಿ ಕಂಡು ಬಂದಿದೆ. ತಿಪ್ಪೇಸ್ವಾಮಿ ಮತ್ತು ಡಾ. ಯೋಗೇಶ್ ಬಾಬು ನಡುವೆ ಮೊಳಕಾಲ್ಮೂರು ಕಾಂಗ್ರೆಸ್ ಟಿಕೆಟ್ ಗಾಗಿ ಪೈಪೋಟಿ ಇದೆ.
ರಾಹುಲ್ ಗಾಂಧಿ ಕಾರ್ನರ್ ಮೀಟಿಂಗ್ ಭಾಷಣ ಮುಗಿದ ನಂತರ ಸಾರ್ವಜನಿಕವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಇಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಪ್ರಮಾಣ ಮಾಡಿದ್ದಾರೆ. ತಿಪ್ಪೇಸ್ವಾಮಿ ಮತ್ತು ಡಾ. ಯೋಗೇಶ್ ಬಾಬು ಒಟ್ಟಾಗಿ ಕೆಲಸ ಮಾಡುತ್ತಾರೆ. ಪಕ್ಷ ಯಾವುದೇ ನಿರ್ಧಾರ ತೆಗೆದುಕೊಂಡರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಕಾರ್ನರ್ ಮೀಟಿಂಗ್ ನಲ್ಲಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.