ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಯಂಗ್ ಇಂಡಿಯಾ ಸಂಸ್ಥೆಗೆ ದೇಣಿಗೆ ನೀಡಿದ ಕುರಿತಂತೆ ಅವರು ವಿಚಾರಣೆ ಎದುರಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ದೆಹಲಿಯ ಇಡಿ ಕಚೇರಿಗೆ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ.
ಯಂಗ್ ಇಂಡಿಯಾ ಸಂಸ್ಥೆಗೆ 25 ಲಕ್ಷ ರೂ ದೇಣಿಗೆ ನೀಡಿದ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ನಿನ್ನೆ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತರಾಗಿ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲೇಶ್ವರ ದೇಗುಲದಲ್ಲಿ ದರ್ಶನ ಪಡೆದಿದ್ದಾರೆ. ಅಲ್ಲಿಂದ ನೇರವಾಗಿ ದೆಹಲಿಗೆ ತೆರಳಿ ಇಡಿ ವಿಚಾರಣೆ ಎದುರಿಸಲಿದ್ದಾರೆ.