ಬೆಂಗಳೂರು: ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಟ್ವೀಟ್ ಮೂಲಕ ಈ ಬಗ್ಗೆ ಅವರು ಆರೋಪಿಸಿದ್ದು, ಸರ್ಕಾರಿ ಸಂಸ್ಥೆಗಳಿಂದ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಟ್ವಿಟ್ಟರ್ ನಲ್ಲಿ ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಸಚಿವರೊಬ್ಬರು ಶೇ. 40 ಕಮಿಷನ್ ಕೇಳಿದ್ದಕ್ಕೆ ಕಾಂಟ್ರ್ಯಾಕ್ಟರ್ ಆತ್ಮಹತ್ಯೆ ಮಾಡಿಕೊಂಡರು. ರಾಜ್ಯ ಸರ್ಕಾರವು 40 ಪರ್ಸೆಂಟ್ ಕಮಿಷನ್ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘ ಸಾರ್ವಜನಿಕವಾಗಿ ಹೇಳಿದೆ. BJP ಪ್ರಾಯೋಜಿತ PSI ಹಗರಣ ಭೇದಿಸಿದ್ದರಿಂದ ಪೊಲೀಸ್ ನೇಮಕಾತಿ ಸ್ಥಗಿತಗೊಂಡಿದೆ. ಆದರೂ ಯಾರ ಮೇಲೂ ದಾಳಿ ನಡೆದಿಲ್ಲ, ಚಾರ್ಜ್ ಶೀಟ್ ಹಾಕಿಲ್ಲ ಎಂದು ದೂರಿದ್ದಾರೆ.