ಕೋಲಾರ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿರುವುದು ಸರಿ ಇದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಮುಳಬಾಗಿಲಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಡಿ.ಕೆ. ಶಿವಕುಮಾರ್ ಹೇಳಿರುವುದು ಸರಿಯಾಗಿದೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಈ ಬಗ್ಗೆ ಬೇರೆ ಏನನ್ನೂ ಕೇಳಬೇಡಿ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.
ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಕುರಿತಂತೆ ಇತ್ತೀಚೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಇದನ್ನು ಅಲ್ಲಗಳೆದಿದ್ದರು. ಅಧಿಕಾರ ಹಂಚಿಕೆ ಕುರಿತಂತೆ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಆಕ್ಷೇಪಿಸಿ, ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ಇಬ್ಬರೇ ಒಪ್ಪಂದ ಮಾಡಿಕೊಂಡ್ರೆ ನಾವೆಲ್ಲಾ ಯಾಕಿರಬೇಕು ಎಂದು ಪ್ರಶ್ನಿಸಿದ್ದರು.