ರಾಮನಗರ: ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಮನಗರ ಜಿಲ್ಲೆಯ ಕೂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯುತ್ತಿಲ್ಲ. ಚರ್ಚೆ ನಡೆಸಿ ಸೂಕ್ತ ಸ್ಥಳದಲ್ಲಿ ಮದ್ಯದಂಗಡಿ ತೆರೆಯುತ್ತೇವೆ. 30 ವರ್ಷಗಳಿಂದ ಹೊಸ ಮದ್ಯದ ಅಂಗಡಿ ತೆರೆಯಲು ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.
ಕೆಲವು ಅಂಗಡಿಯವರು 4-5 ಕೋಟಿ ರೂಪಾಯಿಗೆ ಪರವಾನಿಗೆ ಮಾರಾಟ ಮಾಡುತ್ತಿದ್ದಾರೆ. ಉದ್ಯೋಗ ಸೃಷ್ಟಿ ಉದ್ದೇಶದಿಂದ ಹೊಸ ಮದ್ಯದಂಗಡಿ ತೆರೆಯಲು ಉದ್ದೇಶಿಸಲಾಗಿದೆ. ಈ ಬಗ್ಗೆ ಎಲ್ಲರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದ ಅವರು, ಮದ್ಯ ಸೇವನೆ ನಿಲ್ಲಿಸುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.