ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ನವೆಂಬರ್ 7ರಂದು ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಇದರಿಂದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೆ ಇಡಿ ಸಂಕಷ್ಟ ಎದುರಾಗಿದೆ.
ಇಂದು ಬೆಳಗ್ಗೆ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಜಾರಿ ನಿರ್ದೇಶನಾಲಯದಿಂದ ನೋಟಿಸ್ ಕಳುಹಿಸಲಾಗಿದ್ದು, ನವೆಂಬರ್ 7 ರಂದು ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಸನ್ಮಾನ ಕಾರ್ಯಕ್ರಮದ ಸಂದರ್ಭದಲ್ಲಿಯೇ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.