ಬೆಂಗಳೂರು: ಸಿಎಸ್ಆರ್ ಫಂಡ್(ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್) ನಿಂದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆ ದತ್ತು ಪಡೆಯುವ ಪರಿಕಲ್ಪನೆ ಜಾರಿಗೆ ಮುಂದಾಗಿದ್ದೇವೆ. ಈ ದತ್ತು ಸ್ವೀಕಾರ ಯೋಜನೆ ಹೇಗೆ ಜಾರಿಗೊಳಿಸಬೇಕು? ಸಿಎಸ್ಆರ್ ಫಂಡ್ ನಿಂದ ಸರ್ಕಾರಿ ಶಾಲೆಯ ಅಭಿವೃದ್ಧಿ ಮಾಡಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ನಾನು ಕೂಡ ಮೂರು ಶಾಲೆಗಳ ಮಾಲೀಕನಾಗಿದ್ದು, ಪಂಚಾಯಿತಿ ಮಟ್ಟದಲ್ಲಿ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುತ್ತೇನೆ ಎಂದು ಡಿಸಿಎಂ ಡಿಕೆ ತಿಳಿಸಿದ್ದಾರೆ.