ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಪ್ರಬಲ ಪೈಪೋಟಿ ನಡೆದಿದ್ದು, ಅಂತಿಮವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದರು. ಹೈಕಮಾಂಡ್ ಎದುರು ತಮ್ಮನ್ನು ಮುಖ್ಯಮಂತ್ರಿ ಮಾಡಲು ಇರುವ ಕಾರಣಗಳ ಬಗ್ಗೆ ತಿಳಿಸಿದ್ದರು. ಸಂಕಷ್ಟದ ಸಮಯದಲ್ಲಿ ಪಕ್ಷದ ಸಾರಥ್ಯ ವಹಿಸಿಕೊಂಡು ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತಂದ ತಮಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದರು.
ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಸಿದ್ದರಾಮಯ್ಯ, ಡಿಕೆಶಿ ಪಾತ್ರ ಪ್ರಮುಖವಾಗಿದೆ. ಉಭಯ ನಾಯಕರ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಸಹಜವಾಗಿತ್ತು. ಇದರಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದ್ದು, ಅವರು ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.