alex Certify ಅಚ್ಚರಿ ಹೇಳಿಕೆ ನೀಡಿ ಸಿದ್ದರಾಮಯ್ಯ ಕಡೆಗೇ ಗುರಿ ಇಟ್ಟ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಚ್ಚರಿ ಹೇಳಿಕೆ ನೀಡಿ ಸಿದ್ದರಾಮಯ್ಯ ಕಡೆಗೇ ಗುರಿ ಇಟ್ಟ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಒಬ್ಬರಿಗೆ ಒಂದೇ ಟಿಕೆಟ್ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಮುಂದಾಗಿದ್ದ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡೇ ಡಿ.ಕೆ. ಶಿವಕುಮಾರ್ ಇಂತಹದೊಂದು ಹೇಳಿಕೆ ನೀಡಿದ್ದಾರೆ ಎಂಬ ಚರ್ಚೆಗಳು ನಡೆದಿವೆ.

ಸಿದ್ದರಾಮಯ್ಯ ಈ ಬಾರಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಚಿಂತನೆಯಲ್ಲಿದ್ದಾರೆ. ಕೋಲಾರ, ಬಾದಾಮಿ, ವರುಣಾ, ಚಾಮುಂಡೇಶ್ವರಿ ಸೇರಿದಂತೆ ಹಲವು ಕ್ಷೇತ್ರಗಳಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆದಿವೆ. ಆದರೆ, ಇನ್ನೂ ಕ್ಷೇತ್ರವನ್ನು ಅಂತಿಮಗೊಳಿಸಿಲ್ಲ. ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧೆ ಎಂದು ಕೆಪಿಸಿಸಿಗೆ ಟಿಕೆಟ್ ಬಯಸಿ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿಯಲಿ ಪರಾಭವಗೊಂಡಿದ್ದರು. ಈ ಬಾರಿಯೂ ಅವರು ಸುರಕ್ಷಿತ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಒಬ್ಬರಿಗೆ ಒಂದೇ ಟಿಕೆಟ್ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರ ಕಡೆಗೇ ಗುರಿ ಇಟ್ಟಿದ್ದಾರೆ ಎಂದು ಚರ್ಚೆಗಳು ನಡೆದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...