
ವಿಜಯಪುರ: ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಸ್ವಾಮೀಜಿ ಮನವಿ ಮಾಡಿದ ವಿಚಾರದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಷಯ ನಮ್ಮ ಪಕ್ಷದ ಅಂತರಿಕ ವಿಚಾರವಾಗಿದೆ. ಸಿಎಂ ಬದಲಾವಣೆಯ ಬಗ್ಗೆ ಮಾತನಾಡುವುದು ಸರಿಯಲ್ಲ. ಒಬ್ಬ ಮುಖ್ಯಮಂತ್ರಿ ಇರುವಾಗ ಆ ರೀತಿ ಮಾತನಾಡುವುದು ಅಪ್ರಸ್ತುತ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯಂತ ಅನುಭವಿ, ದಕ್ಷ ಆಡಳಿತಗಾರರಾಗಿದ್ದಾರೆ. ಮುಖ್ಯಮಂತ್ರಿ ಇರುವಾಗ ಈ ರೀತಿ ಮಾತನಾಡುವುದು ಅಪ್ರಸ್ತುತ. ಶ್ರೀಗಳು ಏನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.