ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿದೇಶಕ್ಕೆ ತೆರಳಲು ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಡಿಸೆಂಬರ್ 1 ರಿಂದ 8 ರವರೆಗೆ ದುಬೈಗೆ ತೆರಳಲು ಅನುಮತಿ ನೀಡುವಂತೆ ಕೋರಿ ಡಿ.ಕೆ. ಶಿವಕುಮಾರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಜಾರಿ ನಿರ್ದೇಶನಾಲಯದ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ನ್ಯಾಯಾಧೀಶ ವಿಕಾಸ್ ದುಲ್ ಅವರು ಅರ್ಜಿಯ ವಿಚಾರಣೆ ನಡೆಸಿ ಡಿ.ಕೆ. ಶಿವಕುಮಾರ್ ವಿದೇಶಕ್ಕೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದ್ದಾರೆ.