alex Certify ಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿ.ಕೆ. ಶಿವಕುಮಾರ್ ವಿದೇಶಕ್ಕೆ ತೆರಳಲು ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿ.ಕೆ. ಶಿವಕುಮಾರ್ ವಿದೇಶಕ್ಕೆ ತೆರಳಲು ಅನುಮತಿ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿದೇಶಕ್ಕೆ ತೆರಳಲು ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

ಡಿಸೆಂಬರ್ 1 ರಿಂದ 8 ರವರೆಗೆ ದುಬೈಗೆ ತೆರಳಲು ಅನುಮತಿ ನೀಡುವಂತೆ ಕೋರಿ ಡಿ.ಕೆ. ಶಿವಕುಮಾರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಜಾರಿ ನಿರ್ದೇಶನಾಲಯದ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ನ್ಯಾಯಾಧೀಶ ವಿಕಾಸ್ ದುಲ್ ಅವರು ಅರ್ಜಿಯ ವಿಚಾರಣೆ ನಡೆಸಿ ಡಿ.ಕೆ. ಶಿವಕುಮಾರ್ ವಿದೇಶಕ್ಕೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...