
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಸಿಎಂ ಆಯ್ಕೆ ನಿರ್ಧಾರ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ಡಿ.ಕೆ. ಶಿವಕುಮಾರ್ ಅವರು ಸಿಎಂ ಸ್ಥಾನದ ನಿರೀಕ್ಷೆಯಲ್ಲಿದ್ದು, ಭಾರೀ ಪೈಪೋಟಿ ನಡೆಸಿದ್ದಾರೆ.
63ನೇ ವಸಂತಕ್ಕೆ ಕಾಲಿಟ್ಟ ಡಿ.ಕೆ. ಶಿವಕುಮಾರ್ ಅವರ ಹುಟ್ಟು ಹಬ್ಬ ಇಂದು. ನನ್ನ ಹುಟ್ಟು ಹಬ್ಬದ ಮುನ್ನಾ ದಿನ ಕರ್ನಾಟಕದ ಜನ ನನಗೆ ಅತ್ಯುತ್ತಮ ಬರ್ತಡೇ ಗಿಫ್ಟ್ ನೀಡಿದ್ದಾರೆ. ನನ್ನ ಕಾಂಗ್ರೆಸ್ ಕುಟುಂಬಕ್ಕೆ ಧನ್ಯವಾದಗಳು. ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
‘ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ.
ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ.
ಅವರ ಆತ್ಮೀಯ ಶುಭಾಶಯಗಳಿಗಾಗಿ ನನ್ನ ಕಾಂಗ್ರೆಸ್ ಕುಟುಂಬಕ್ಕೆ ಧನ್ಯವಾದಗಳು’ ಎಂದು ಡಿ.ಕೆ. ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.