ಬೆಂಗಳೂರು : ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಕಾಣೆಯಾಗಿದ್ದಾರೆ. ದಯವಿಟ್ಟು ಹುಡುಕಿಕೊಡಿ ಎಂದು ರಾಜ್ಯ ಬಿಜೆಪಿ ಘಟಕ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದೆ.
ಎಕ್ಸ್ ನಲ್ಲಿ ಪೋಸ್ಟರ್ ಬಿಡುಗಡೆ ಮಾಡಿರುವ ಬಿಜೆಪಿ, ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ದೊಡ್ಡಮಟ್ಟದಲ್ಲಿ ಸಹಕರಿಸಿದ ಋಣವನ್ನು ತೀರಿಸಲು ಹಾಗೂ ಲೋಕಸಭೆ ಚುನಾವಣೆಯ ಬಳಿಕ ಸಿಎಂ ಕುರ್ಚಿಗೆ ಲಾಬಿ ಮಾಡಲು ಕಾವೇರಿಯನ್ನು ಸ್ಟಾಲಿನ್ ನಾಡಿಗೆ ಬೇಕಾಬಿಟ್ಟಿಯಾಗಿ ಹರಿಬಿಟ್ಟ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಕಾಣೆಯಾಗಿದ್ದಾರೆ. ದಯವಿಟ್ಟು ಹುಡುಕಿ ಕೊಡಿ ಎಂದು ಬಿಜೆಪಿ ಪೋಸ್ಟ್ ಮಾಡಿದೆ.