
ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಸಿವಿಲ್ ದಾವೆ ವರ್ಗಾವಣೆಗೆ ಹೈಕೋರ್ಟ್ ನಿರಾಕರಿಸಿದೆ.
204 ಕೋಟಿ ರೂ. ಪರಿಹಾರ ಕೋರಿದ ದಾವೆ ವರ್ಗಾವಣೆಗೆ ಹೈಕೋರ್ಟ್ ನಿರಾಕರಿಸಿದೆ. ನ್ಯಾಯಾಲಯಕ್ಕೆ ಹಾಜರಾಗುವಾಗ ಸೂಕ್ತ ಭದ್ರತೆ ಒದಗಿಸಲು ಸೂಚನೆ ನೀಡಿದೆ. ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ.
ತಮಗೆ ಕಿರುಕುಳ ನೀಡುವ ಉದ್ದೇಶದಿಂದ ಡಿ.ಕೆ. ಶಿವಕುಮಾರ್ ಕನಕಪುರದಲ್ಲಿ ದಾವೆ ಹೂಡಿದ್ದಾರೆ. ವಿಚಾರಣೆಗೆ ಹಾಜರಾದರೆ ದಾಳಿ ನಡೆಸಬಹುದು. ಹಾಗಾಗಿ ಬೆಂಗಳೂರಿಗೆ ದಾವೆ ವರ್ಗಾಯಿಸಬೇಕೆಂದು ಯತ್ನಾಳ್ ಮನವಿ ಮಾಡಿದ್ದರು.