alex Certify ನನ್ನ ಬಗ್ಗೆ ಅನುಕಂಪ ಬೇಡ, ಅವರ ಪಕ್ಷ ನೋಡಿಕೊಳ್ಳಲಿ: ಡಿಕೆಶಿಗೆ ಯಡಿಯೂರಪ್ಪ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನ ಬಗ್ಗೆ ಅನುಕಂಪ ಬೇಡ, ಅವರ ಪಕ್ಷ ನೋಡಿಕೊಳ್ಳಲಿ: ಡಿಕೆಶಿಗೆ ಯಡಿಯೂರಪ್ಪ ತಿರುಗೇಟು

ಶಿವಮೊಗ್ಗ: ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಿದ್ದಾರೆ. ಬಿಜೆಪಿ ಬಳಸಿ ಬಿಸಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ನಾನು ನಾಲ್ಕು ಬಾರಿ ಮುಖ್ಯಮಂತ್ರಿ ಆಗಲು ಬಿಜೆಪಿ ಅವಕಾಶ ಮಾಡಿಕೊಟ್ಟಿದೆ. ನನ್ನ ಬಗ್ಗೆ ಡಿ.ಕೆ. ಶಿವಕುಮಾರ್ ಗೆ ಅನುಕಂಪ ಬೇಡ. ಅವರ ಪಕ್ಷವನ್ನು ನೋಡಿಕೊಳ್ಳಲಿ. ಯಡಿಯೂರಪ್ಪನವರನ್ನು ಸೈಡ್ ಲೈನ್ ಮಾಡಿದ್ದಾರೆ ಎಂಬ ಪ್ರಶ್ನೆಯೇ ಇಲ್ಲ. ಯಾವುದೇ ಅಧಿಕಾರ ಇಲ್ಲದಿದ್ದರೂ ಕೆಲಸ ಮಾಡಿ ತೋರಿಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಶಿಕಾರಿಪುರದಲ್ಲಿ ಯಡಿಯೂರಪ್ಪ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...