
ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಭಾಗಿಯಾಗಿದ್ದ ಯಡಿಯೂರಪ್ಪ, ನಮ್ಮ ಪಕ್ಷದ ಶಾಸಕರನ್ನು ಡಿ.ಕೆ. ಶಿವಕುಮಾರ್ ಸಂಪರ್ಕ ಮಾಡಿದ್ದಾರೆ. ಒಂದಿಬ್ಬರು ಶಾಸಕರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಯಾರೂ ಕೂಡ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿ ಕಡೆ ಬರಲಿದ್ದಾರೆ ಎಂದು ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.