ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಾದ ಪಾಲನ್ನು ಸರಿಯಾಗಿ ಕೊಟ್ಟಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ಕೇಳಿದ್ದು 18,174 ಕೋಟಿ ರೂಪಾಯಿ. ಅವರು ಘೋಷಣೆ ಮಾಡಿದ್ದು 3,454 ಕೋಟಿ ರೂ. ಇದು ಬಹಳ ಕಡಿಮೆ ಆಯಿತು. ಕೇಂದ್ರ ಸರ್ಕಾರ ಕೊಡಬೇಕಾದ ಪಾಲನ್ನು ಸರಿಯಾಗಿ ಕೊಟ್ಟಿಲ್ಲ. ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತಿದೆ ಇದು ಎಂದು ಕಿಡಿಕಾರಿದರು.
ಅಟ್ ಲಿಸ್ಟ್ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ನ್ಯಾಯಾಲಯಕ್ಕೆ ಹೋದ ಬಳಿಕ ಈಗ ಪರಿಹಾರ ಘೋಷಿಸಿದ್ದಾರೆ. ಆದರೆ ಈ ಪರಿಹಾರ ಸಾಲುವುದಿಲ್ಲ. ನಮ್ಮ ಹೋರಾಟವನ್ನು ನಾವು ಮುಂದುವರೆಸುತ್ತೇವೆ ಎಂದು ಹೇಳಿದರು.