ರಾಮನಗರ: ರಾಮನಗರ ವಿಧಾನಸಭೆ ಕ್ಷೇತ್ರದಿಂದ ಸಂಸದ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಚರ್ಚೆ ನಡೆದಿರುವುದು ನಿಜ. ಹೈಕಮಾಂಡ್ ಮಟ್ಟದಲ್ಲಿ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಚರ್ಚೆ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುನರುಚ್ಛರಿಸಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ಬಹಳ ದಿನದಿಂದ ಈ ಭಾಗದ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಕ್ಷೇತ್ರದಲ್ಲಿ ಒಂದು ಇತಿಹಾಸವಿದೆ. ಪಕ್ಷ ಹೇಳಿದರೆ ಏನು ಮಾಡೋಕಾಗುತ್ತೆ. ನಾನು ಸಚಿವನಾಗಿದ್ದರೂ ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಲಿಲ್ಲವೇ? ರಾಜಕೀಯದಲ್ಲಿ ಕೆಲವು ಸಂದರ್ಭಗಳಲ್ಲಿ ಸ್ಪರ್ಧೆ ಅನಿವಾರ್ಯವಾಗಿರುತ್ತದೆ ಎಂದರು.
ಡಿ.ಕೆ. ಸುರೇಶ್ ಯಾವತ್ತೂ ವೇದಿಕೆ ಹತ್ತಲಿಲ್ಲ. ಮೈಕ್ ಹೇಳಿದಿರಲಿಲ್ಲ. ಈ ಹಿಂದೆ ಸೋನಿಯಾ ಗಾಂಧಿ ಡಿ.ಕೆ. ಸುರೇಶ್ ಹೆಸರು ಘೋಷಿಸಿದ್ದರು. ಜನ ಏನು ಹೇಳುತ್ತಾರೋ ಅದನ್ನು ನಾವು ಕೇಳಬೇಕಲ್ಲವೇ? ರಾಜಕೀಯದಲ್ಲಿ ನಾವೇನು ಅಂದುಕೊಳ್ಳುತ್ತೇವೆಯೋ ಅದು ಆಗಲ್ಲ. ಯಾವ ಸಂದರ್ಭದಲ್ಲಿ ಏನು ಆಗಬೇಕು ಅದು ಹಾಗೆ ಆಗುತ್ತೆ ಎಂದು ಪರೋಕ್ಷವಾಗಿ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಸುಳಿವು ನೀಡಿದ್ದಾರೆ.