alex Certify ಹೈವೋಲ್ಟೇಜ್ ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ತಿರಸ್ಕೃತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈವೋಲ್ಟೇಜ್ ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ತಿರಸ್ಕೃತ

ಬೆಂಗಳೂರು: ರಾಮನಗರ ಜಿಲ್ಲೆ ಕನಕಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ತಿರಸ್ಕೃತಗೊಂಡಿದೆ. ಬಿ ಫಾರಂ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದೆ.

ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿ ಕೊನೆ ಕ್ಷಣದಲ್ಲಿ ಅವರು ನಾಮಪತ್ರ ಸಲ್ಲಿಸಿದ್ದರು.

ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಅಂಗೀಕಾರವಾಗಿದ್ದು, ಸುರೇಶ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಚುನಾವಣಾ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ನಾಮಪತ್ರವನ್ನು ಅಂಗೀಕಾರ ಮಾಡಿದ್ದಾರೆ. ಒಂದು ವೇಳೆ ಡಿ.ಕೆ. ಸುರೇಶ್ ನಾಮಪತ್ರ ಅಂಗೀಕಾರಗೊಂಡಿದ್ದರೆ ಅದನ್ನು ಅವರು ಹಿಂಪಡೆದುಕೊಳ್ಳುತ್ತಿದ್ದರು.

ಕನಕಪುರ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರ ಎದುರು ಬಿಜೆಪಿ ಅಭ್ಯರ್ಥಿಯಾಗಿ ಆರ್. ಅಶೋಕ್ ಅವರು ಸ್ಪರ್ಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...