‘ನ್ಯಾಷನಲ್ ಹೆರಾಲ್ಡ್’ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಹುಲ್ ಗಾಂಧಿಯವರ ವಿಚಾರಣೆಯನ್ನು ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಕರ್ನಾಟಕ ಸಂಸದ ಡಿ.ಕೆ. ಸುರೇಶ್ ಅವರನ್ನು ಪೊಲೀಸರು ಎಳೆದಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಬಳಿಕ ಸಂಸದ ಡಿ.ಕೆ. ಸುರೇಶ್ ಅವರನ್ನು ಬಂಧಿಸಿ ನರೇಲಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದು, ಅವರು ಅಲ್ಲಿ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಠಾಣೆಯಲ್ಲೇ ರಕ್ತದಾನ ಮಾಡಿದ್ದಾರೆ.