alex Certify ಇಂದು ನಾಮಪತ್ರ ಸಲ್ಲಿಕೆ ಮೊದಲ ದಿನವೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಉಮೇದುವಾರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ನಾಮಪತ್ರ ಸಲ್ಲಿಕೆ ಮೊದಲ ದಿನವೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಉಮೇದುವಾರಿಕೆ

ರಾಮನಗರ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೊದಲ ದಿನವೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಾರ್ಚ್ 30ರಂದು ಬಿ.ಎಸ್.ಪಿ. ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ ನಾಮಪತ್ರ ಸಲ್ಲಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...