ಬೆಂಗಳೂರು: ರಾಜ್ಯದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧ ಆವರಣದಲ್ಲಿ ಅತ್ಯಾಧುನಿಕ ಜೀವ ರಕ್ಷಕ ಸೌಲಭ್ಯವುಳ್ಳ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರು, ಅತಿ ವೇಗವಾಗಿ ವಾಹನ ಚಲಾಯಿಸುವವರ ಚಾಲನಾ ಪರವಾನಿಗೆ ರದ್ದು ಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ ನೀಡಿದ್ದಾರೆ.
ಸರ್ಕಾರ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅಪಘಾತಗಳಿಂದ ಉಂಟಾಗುವ ಸಾವು ತಡೆಯಲು ವಿವಿಧ ಕಾರ್ಯಕ್ರಮ ರೂಪಿಸಿದೆ. ಸಾರ್ವಜನಿಕರು ಸಹ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಸಹಕರಿಸಬೇಕು. ವೇಗದ ಚಾಲನೆ, ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಪರವಾನಿಗೆ ರದ್ದು ಪಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.