
ಫೆಬ್ರವರಿಯಿಂದ ರಾಜ್ಯದಲ್ಲಿ ಕ್ಯೂಆರ್ ಕೋಡ್ ಇರುವ ಏಕರೂಪದ ಡಿಎಲ್, ಆರ್.ಸಿ. ಸ್ಮಾರ್ಟ್ ಕಾರ್ಡ್ ಸೌಲಭ್ಯ ಸಿಗಲಿದೆ.
ಹೊಸ ಚಾಲನಾ ಪರವಾನಿಗೆ, ವಾಹನ ನೋಂದಣಿ ಪ್ರಮಾಣ ಪತ್ರ ಪಡೆಯುವವರಿಗೆ ಏಕರೂಪದ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಹಳೆ ಡಿಎಲ್ ಗಳನ್ನು ನವೀಕರಣದ ವೇಳೆ ಬದಲಾಯಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸ್ಮಾರ್ಟ್ ಕಾರ್ಡ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಡಿಎಲ್ ಹೊಂದಿರುವ ಪೂರ್ಣ ಮಾಹಿತಿ ಸಿಗಲಿದೆ. ಸಂಚಾರದ ಅವಧಿಯಲ್ಲಿ ಪೊಲೀಸರು ಅಥವಾ ಸಾರಿಗೆ ಇಲಾಖೆ ಸಿಬ್ಬಂದಿ ಸುಲಭವಾಗಿ ತಪಾಸಣೆ ಮಾಡಬಹುದಾಗಿದೆ.