
ಬೆಂಗಳೂರು: ವಾಹನ ಚಾಲನಾ ಪರವಾನಿಗೆ(ಡಿಎಲ್), ವಾಹನ ನೋಂದಣಿ ಪ್ರಮಾಣ ಪತ್ರ(ಆರ್.ಸಿ.) ಸ್ಮಾರ್ಟ್ ಕಾರ್ಡ್ ಪೂರೈಕೆಗೆ ಹೊಸ ಗುತ್ತಿಗೆದಾರರ ನೇಮಕಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.
ಡಿಎಲ್ ಮತ್ತು ಆರ್.ಸಿ. ಸ್ಮಾರ್ಟ್ ಕಾರ್ಡ್ ಗಳನ್ನು ಪೂರೈಕೆ ಮಾಡುವ ಗುತ್ತಿಗೆದಾರರ ಅವಧಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ ಹೊಸ ಗುತ್ತಿಗೆದಾರರ ನೇಮಕಕ್ಕೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ಡಿಎಲ್ ಮತ್ತು ಆರ್.ಸಿ. ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿನ ವಿಳಂಬ ನಿವಾರಿಸುವ ಉದ್ದೇಶದಿಂದ ಸಾರಿಗೆ ಇಲಾಖೆ ಕೆಲವು ತಿಂಗಳ ಹಿಂದೆಯೇ ಗುತ್ತಿಗೆದಾರರ ನೇಮಕಾತಿಗೆ ಟೆಂಡರ್ ಪ್ರಕ್ರಿಯೆ ನಡೆಸಿದೆ.
ಎರಡು ಸಂಸ್ಥೆಗಳು ಬಿಡ್ ಸಲ್ಲಿಸಿದ್ದು, ಇವುಗಳನ್ನು ಪರಿಶೀಲಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಸರ್ಕಾರದಿಂದ ಅನುಮೋದನೆ ದೊರೆತ ಕೂಡಲೇ ಆರ್.ಸಿ. ಮತ್ತು ಡಿಎಲ್ ಸ್ಮಾರ್ಟ್ ಕಾರ್ಡ್ ವಿತರಣೆಗೆ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.