ಸರಿಯಾದ ಆಹಾರ ಪದ್ಧತಿ ನಮ್ಮ ಆರೋಗ್ಯವನ್ನು ಉತ್ತಮಗಳಿಸುತ್ತದೆ. ಹಸಿವಾದಾಗ ಆರೋಗ್ಯದ ಬಗ್ಗೆ ಗಮನ ಕೊಡದೆ ಸಿಕ್ಕ ಸಿಕ್ಕ ಆಹಾರವನ್ನು ಸೇವಿಸುತ್ತೇವೆ. ಆದರೆ ಕೆಲವೊಂದು ಆಹಾರ ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಇದರಿಂದ ಅನಾರೋಗ್ಯ ಸಮಸ್ಯೆ ಕಾಡುತ್ತದೆ. ಆ ಆಹಾರಗಳು ಯಾವುದೆಂಬುದನ್ನು ತಿಳಿಯಿರಿ.
*ಸೋಡಾವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬೇಡಿ. ಇದರಲ್ಲಿ ಹೆಚ್ಚಿನ ಪ್ರಮಾಣದ ಕಾರ್ಬೋನೇಟ್ ಆಮ್ಲವಿರುವುದರಿಂದ ಇದು ವಾಕರಿಕೆಗೆ ಕಾರಣವಾಗುತ್ತದೆ.
*ಮಸಾಲೆಯುಕ್ತ ಆಹಾರಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಡಿ. ಇದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆ ನೋವು ಕಾಡುತ್ತದೆ.
*ಖಾಲಿ ಹೊಟ್ಟೆಯಲ್ಲಿ ಕಾಫಿ, ಟೀ ಸೇವಿಸಬೇಡಿ. ಇದರಲ್ಲಿರುವ ಕೆಫೀನ್ ವಾಕರಿಕೆ, ಹೊಟ್ಟೆ ನೋವಿಗೆ ಕಾರಣವಾಗುತ್ತದೆ.
*ಮೊಸರು ಆರೋಗ್ಯಕ್ಕೆ ಉತ್ತಮ. ಆದರೆ ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹೊಟ್ಟೆಯ ಸೆಳೆತಕ್ಕೆ ಕಾರಣವಾಗಬಹುದು.
*ಸಿಹಿ ಆಲೂಗಡ್ಡೆಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬೇಡಿ. ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತದೆ. ಎದೆಯುರಿ ಸಮಸ್ಯೆ ಕಂಡು ಬರುತ್ತದೆ.
*ಬಾಳೆಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹದಲ್ಲಿ ಮೆಗ್ನೀಶಿಯಂ ಅಸಮತೋಲ ಉಂಟಾಗುತ್ತದೆ.