alex Certify ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ಸೇವಿಸಲೇಬೇಡಿ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ಸೇವಿಸಲೇಬೇಡಿ….!

ದೇಹವು ದಿನವಿಡೀ ಶಕ್ತಿಯುತವಾಗಿರಲು ಬೆಳಗಿನ ಉಪಹಾರ ಬಹಳ ಮುಖ್ಯ. ಆದರೆ ಕೆಲವರು ಬೆಳಗಿನ ಉಪಹಾರಕ್ಕೆ ತಪ್ಪಾದ ಆಹಾರವನ್ನು ಆಯ್ಕೆ ಮಾಡುತ್ತಾರೆ. ಅದು ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಬೆಳಿಗ್ಗೆ ಹೊಟ್ಟೆ ಖಾಲಿ ಇರುವ ಕಾರಣ ಇಂತಹ ಆಹಾರಗಳನ್ನು ಸೇವಿಸಬೇಡಿ.

*ಸಲಾಡ್ : ಸಲಾಡ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಯಾವುದೇ ಪ್ರಯೋಜನವಿಲ್ಲ. ಇದರಿಂದ ಹೊಟ್ಟೆಯಲ್ಲಿ ಅನಿಲ ಮತ್ತು ಎದೆಯುರಿ ಸಮಸ್ಯೆ ಕಾಡುತ್ತದೆ.

*ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ನಿಂಬೆ, ಕಿವಿ ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬೇಡಿ. ಇದು ಆಮ್ಲೀಯತೆಯನ್ನು ಹೊಂದಿದ್ದು, ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಮುಂತಾದ ಸಮಸ್ಯೆ ಕಾಡುತ್ತದೆ.

*ಬಾಳೆಹಣ್ಣು : ಬಾಳೆಹಣ್ಣು ಆರೋಗ್ಯಕ್ಕೆ ಉತ್ತಮವಾದರೂ ಇದನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು. ಇದರಿಂದ ವಾಂತಿ, ಹೊಟ್ಟೆಯ ಅಸ್ವಸ್ಥತೆ ಸಮಸ್ಯೆ ಕಾಡುತ್ತದೆ.

*ಟೊಮೆಟೊ : ಟೊಮೆಟೊವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಇದು ಹಾನಿಯುಂಟುಮಾಡುತ್ತದೆ. ಇದರಲ್ಲಿ ಸಿಟ್ರಸ್ ಹಣ್ಣುಗಳಂತಹ ಆಮ್ಲೀಯ ಅಂಶವಿದ್ದು, ಅದು ಹೊಟ್ಟೆಗೆ ಹಾನಿಕಾರಕವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...