ಜನರು ವಿಮಾನದಲ್ಲಿ ಪ್ರಯಾಣ ಬೆಳೆಸಲು ಇಷ್ಟಪಡುತ್ತಾರೆ. ಯಾಕೆಂದರೆ ಇದು ತುಂಬಾ ಖುಷಿಯನ್ನು ನೀಡುತ್ತದೆ. ಆದರೆ ಕೆಲವರು ವಿಮಾನದಲ್ಲಿ ಪ್ರಯಾಣಿಸುವಾಗ ಮದ್ಯ ಸೇವನೆ ಮಾಡುತ್ತಾರೆ. ಆದರೆ ಈ ತಪ್ಪನ್ನು ಮಾಡಬೇಡಿ. ಇದರಿಂದ ಆರೋಗ್ಯ ಸಮಸ್ಯೆ ಕಾಡುತ್ತದೆಯಂತೆ.
ವಿಮಾನ ಪ್ರಯಾಣ ಮಾಡುವಾಗ ಮದ್ಯಪಾನ ಮಾಡಿ ನಂತರ ನಿದ್ರೆ ಮಾಡುವುದರಿಂದ ಹೃದಯಕ್ಕೆ ಹಾನಿಯಾಗಬಹುದಂತೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ವಾಸ್ತವಾಗಿ ವಿಮಾನದಲ್ಲಿ ಗಾಳಿಯ ಒತ್ತಡವು ಕಡಿಮೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಆಲ್ಕೋಹಾಲ್ ಸೇವಿಸಿದ ನಂತರ ಮಲಗುವುದರಿಂದ ಅವರ ರಕ್ತದಲ್ಲಿನ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತದೆ.
ಇದು ಅವರ ಹೃದಯ ಬಡಿತವನ್ನು ಹೆಚ್ಚಿಸುತ್ತದೆ. ಇದು ಹೃದಯ ವ್ಯವಸ್ಥೆಯ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತದೆ. ಇದರಿಂದ ಹೃದಯ ಮತ್ತು ಶ್ವಾಸಕೋಶದ ಸಮಸ್ಯೆ ಇರುವವರು ಹೆಚ್ಚು ಸಮಸ್ಯೆಯನ್ನು ಅನುಭವಿಸುತ್ತಾರಂತೆ. ಇದು ಪ್ರಾಣಾಪಾಯಕ್ಕೂ ಕಾರಣವಾಗಬಹುದಂತೆ.
ಹಾಗಾಗಿ ಜನರು ವಿಮಾನದಲ್ಲಿ ಪ್ರಯಾಣ ಮಾಡುವಾಗ ಮದ್ಯಪಾನ ಮಾಡಬಾರದು ಎಂದು ಸಂಶೋಧಕರು ತಿಳಿಸಿದ್ದಾರೆ.