alex Certify ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಪ್ಪಿತಪ್ಪಿಯೂ ಈ ಹಣ್ಣುಗಳನ್ನು ಸೇವಿಸಬೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಪ್ಪಿತಪ್ಪಿಯೂ ಈ ಹಣ್ಣುಗಳನ್ನು ಸೇವಿಸಬೇಡಿ

ಖಾಲಿ ಹೊಟ್ಟೆಯಲ್ಲಿ ಕೆಲವು ಹಣ್ಣುಗಳನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯ ಹಾಳಾಗುತ್ತದೆ. ಹಾಗಾದರೆ ಆ ಹಣ್ಣುಗಳು ಯಾವುದೆಂಬುದನ್ನು ತಿಳಿಯೋಣ.

*ಬಾಳೆಹಣ್ಣು : ಇದರಲ್ಲಿ ಮೆಗ್ನೀಶಿಯಂ ಇರುತ್ತದೆ. ಇದು ಹೃದಯಕ್ಕೆ ಅಪಾಯಕಾರಿ. ಆದ ಕಾರಣ ಬಾಳೆ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸದೇ ಇರುವುದು ಒಳಿತು.

*ಮಾವಿನ ಹಣ್ಣು : ಮಾವಿನ ಹಣ್ಣಿನಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿರುತ್ತದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ನಿಮ್ಮ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ ಮಧುಮೇಹ ಸಮಸ್ಯೆ ಕಾಡಬಹುದು.

*ದ್ರಾಕ್ಷಿ : ಇದರಲ್ಲಿ ಸಿಟ್ರಿಕ್ ಹಾಗೂ ಆಮ್ಲವಿದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹೊಟ್ಟೆಯಲ್ಲಿ ಕಿರಿಕಿರಿ ಹಾಗೂ ಗ್ಯಾಸ್ ಹೆಚ್ಚಾಗುವ ಸಾಧ್ಯತೆ ಇರುತ್ತದೆ.

*ಪೇರಳೆ ಹಣ್ಣು : ಪೇರಳೆ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹೊಟ್ಟೆಯ ಸೂಕ್ಷ್ಮ ಪೊರೆಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ.

*ಲಿಚಿ ಹಣ್ಣು : ಲಿಚಿ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ಅದರಲ್ಲಿರುವ ಅಂಶಗಳು ಮೆದುಳಿನ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಜ್ವರ, ವಾಂತಿ, ವಾಕರಿಕೆ, ಮುಂತಾದ ಸಮಸ್ಯೆ ಉಂಟಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...