alex Certify ಉರಿ ಮೂತ್ರ ಸಮಸ್ಯೆ ನಿವಾರಣೆಗೆ ಮಾಡಿ ಈ ‘ಮನೆ ಮದ್ದು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉರಿ ಮೂತ್ರ ಸಮಸ್ಯೆ ನಿವಾರಣೆಗೆ ಮಾಡಿ ಈ ‘ಮನೆ ಮದ್ದು’

ದೇಹದಲ್ಲಿ ನೀರು ಕಡಿಮೆಯಾದಾಗ ಅಥವಾ ಏನಾದರೂ ಸೋಂಕು ಆದಾಗ ಮೂತ್ರ ಉರಿ ಸಮಸ್ಯೆ ಕಂಡು ಬರುತ್ತದೆ. ನಿತ್ಯ ಮೂತ್ರ ಉರಿ ಸಮಸ್ಯೆ ಬರುತ್ತಿದ್ದರೆ ಗರ್ಭಕೋಶ ತೊಂದರೆ, ಕಿಡ್ನಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಸಮಸ್ಯೆಯಿಂದ ಹೊರ ಬರಬೇಕಾದರೆ ಪ್ರತಿನಿತ್ಯ ದಾಳಿಂಬೆ ಜ್ಯೂಸ್‌ ಕುಡಿಯಬೇಕು.

* ದಾಳಿಂಬೆಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಉರಿಮೂತ್ರ ಸಮಸ್ಯೆ ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ಇನ್ನು ದಾಳಿಂಬೆ ಜ್ಯೂಸ್‌ ಕ್ಯಾನ್ಸರ್‌ ಹಾಗೂ ಹೃದಯ ಸಂಬಂಧಿ ಕಾಯಿಲೆಯನ್ನು ತಡೆಯುವ ಸಾಮರ್ಥ್ಯ ಹೊಂದಿದೆ.

* ದಾಳಿಂಬೆಯಲ್ಲಿ ವಿಟಮಿನ್‌ ಸಿ ಇದ್ದು, ಮೂತ್ರ ಉರಿ ಕಡಿಮೆ ಮಾಡಿ ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿಸುತ್ತದೆ.

* ಮೂತ್ರ ಉರಿ ಕಡಿಮೆ ಮಾಡುವ ಇತರ ಆಹಾರಗಳೆಂದರೆ ಕ್ರ್ಯಾನ್ ಬೆರ್ರಿ ಜ್ಯೂಸ್‌, ವಿಟಮಿನ್‌ ಸಿ ಹೆಚ್ಚಿರುವ ಕಿತ್ತಳೆ, ದ್ರಾಕ್ಷಿ, ಕಿವಿ ಹಣ್ಣು.

* ಮೂತ್ರ ಉರಿ ಕಂಡು ಬಂದರೆ ಸಾಕಷ್ಟು ನೀರು ಕುಡಿಯಬೇಕು. ನೀರು ಜಾಸ್ತಿ ಕುಡಿಯುವುದರಿಂದ ದೇಹದಲ್ಲಿರುವ ಮೂತ್ರ ಸೋಂಕಿಗೆ ಕಾರಣವಾದ ಬ್ಯಾಕ್ಟೀರಿಯಾವನ್ನು ಹೊರ ಹಾಕಿ ಕಿಡ್ನಿಯನ್ನು ಸಂರಕ್ಷಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...