alex Certify ಎಣ್ಣೆಯುಕ್ತ ಆಹಾರ ಸೇವನೆಯಿಂದ ಉಂಟಾಗುವ ಹಾನಿಯನ್ನು ತಪ್ಪಿಸಲು ಹೀಗೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಣ್ಣೆಯುಕ್ತ ಆಹಾರ ಸೇವನೆಯಿಂದ ಉಂಟಾಗುವ ಹಾನಿಯನ್ನು ತಪ್ಪಿಸಲು ಹೀಗೆ ಮಾಡಿ

ಎಣ್ಣೆಯುಕ್ತ ಆಹಾರವನ್ನು ಮಕ್ಕಳು ಮಾತ್ರವಲ್ಲ ದೊಡ್ಡವರು ಕೂಡ ಇಷ್ಟಪಡುತ್ತಾರೆ. ಇದನ್ನು ಸೇವಿಸಿದರೆ ಆರೋಗ್ಯ ಹಾಳಾಗುತ್ತದೆ ಎಂದು ತಿಳಿದರೂ ಕೆಲವರು ಅದನ್ನೇ ಹೆಚ್ಚು ಸೇವಿಸುತ್ತಾರೆ. ಅಂತವರು ಈ ಎಣ್ಣೆಯುಕ್ತ ಆಹಾರ ಸೇವಿಸಿದ ಬಳಿಕ ಏನನ್ನು ಮಾಡಬಾರದು? ಏನನ್ನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಎಣ್ಣೆಯುಕ್ತ ಆಹಾರ ಸೇವಿಸಿದ ಬಳಿಕ ಇವುಗಳನ್ನು ಮಾಡಬಾರದು:

* ಎಣ್ಣೆಯುಕ್ತ ಆಹಾರ ಸೇವಿಸಿದ ಬಳಿಕ ಐಸ್ ಕ್ರೀಂ, ಕೋಲ್ಡ್ ಜ್ಯೂಸ್ ಗಳಂತಹ ತಣ್ಣನೆಯ ಆಹಾರವನ್ನು ಸೇವಿಸಬಾರದು. ಇದರಿಂದ ಆಹಾರ ಜೀರ್ಣವಾಗಲು ಕಷ್ಟವಾಗುತ್ತದೆ. ಇದರಿಂದ ಯಕೃತ್ತು, ಹೊಟ್ಟೆ ಮತ್ತು ಕರುಳಿನ ಮೇಲೆ ಪರಿಣಾಮ ಬೀರುತ್ತದೆ. ಹೊಟ್ಟೆ ಉಬ್ಬಿಕೊಳ್ಳುತ್ತದೆ.

* ಎಣ್ಣೆಯುಕ್ತ ಆಹಾರ ಸೇವಿಸಿದ ಬಳಿಕ ನಿದ್ರೆ ಮಾಡಬಾರದು. ಇದರಿಂದ ಕೂಡ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ ಹಾಗೂ ದೇಹದಲ್ಲಿ ಕೊಬ್ಬಿನಾಂಶ ಹೆಚ್ಚಾಗಿ ತೂಕ ಹೆಚ್ಚಾಗುತ್ತದೆ.

ಎಣ್ಣೆಯುಕ್ತ ಆಹಾರ ಸೇವಿಸಿದ ಬಳಿಕ ಇವುಗಳನ್ನು ಮಾಡಿ:

* ಎಣ್ಣೆಯುಕ್ತ ಆಹಾರ ಸೇವಿಸಿದ ಬಳಿಕ ಸರಿಯಾಗಿ ನೀರನ್ನು ಕುಡಿಯಿರಿ. ಇದರಿಂದ ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ. ತ್ಯಾಜ್ಯ ಉತ್ಪನ್ನಗಳು ದೇಹದಿಂದ ಹೊರ ಹೋಗುತ್ತವೆ. ಮತ್ತು ಮಲಬದ್ಧತೆ ನಿವಾರಣೆಯಾಗುತ್ತದೆ.

*ನಿಂಬೆ ರಸ ಮಿಶ್ರಿತ ನೀರನ್ನು ಸೇವಿಸಿ. ಇದರಿಂದ ಕೊಬ್ಬಿನಾಂಶ ಕರಗುತ್ತದೆ. ಎಣ್ಣೆಯುಕ್ತ ಆಹಾರ ಸೇವನೆಯಿಂದ ಉಂಟಾಗುವ ಹಾನಿಯನ್ನು ತಪ್ಪಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...