alex Certify ಮೈಗ್ರೇನ್ ಸಮಸ್ಯೆ ನಿವಾರಿಸಲು ಪ್ರತಿದಿನ ಮಾಡಿ ಈ ಯೋಗಾಭ್ಯಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಗ್ರೇನ್ ಸಮಸ್ಯೆ ನಿವಾರಿಸಲು ಪ್ರತಿದಿನ ಮಾಡಿ ಈ ಯೋಗಾಭ್ಯಾಸ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಹೆಚ್ಚಾಗಿ ಖಿನ್ನತೆ, ಆತಂಕ ಮತ್ತು ಬಳಲಿಕೆಯಿಂದ ಉಂಟಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಯೋಗಾಭ್ಯಾಸವನ್ನು ಪ್ರತಿದಿನ ಮಾಡಿ.

*ಹಸ್ತಪದಾಸನ : ಇದು ರಕ್ತಪರಿಚಲನೆಯನ್ನು ಹೆಚ್ಚಿಸುವ ಮೂಲಕ ನರಮಂಡಲಕ್ಕೆ ಶಕ್ತಿಯನ್ನು ನೀಡುತ್ತದೆ. ಮನಸ್ಸನ್ನು ಶಾಂತಗೊಳಿಸುತ್ತದೆ. ನಿಮ್ಮ ಕಾಲುಗಳನ್ನು ಒಟ್ಟಿಗೆ ಸೇರಿಸಿ ನೇರವಾಗಿ ಇಟ್ಟು ನಿಮ್ಮ ಕೈಗಳನ್ನು 180 ಡಿಗ್ರಿ ರೇಖೆಯಲ್ಲಿ ಬಾಗಿಸಿ ಕಾಲ್ಬೆರಳುಗಳನ್ನು ಸ್ಪರ್ಶಿಸಿ. ನಿಮ್ಮ ಬೆನ್ನನ್ನು ನೇರವಾಗಿ ಇರಿಸಿ. ಈ ಸ್ಥಾನದಲ್ಲಿ ಕೆಲವು ಸೆಕೆಂಡುಗಳ ಕಾಲ ಹಿಡಿದಿಟ್ಟುಕೊಳ್ಳಿ. ಇದನ್ನು ದಿನಕ್ಕೆ 5 ಬಾರಿ ಮಾಡಿ.

*ಸೇತುಬಂಧಾಸನ(ಸೇತುವೆ ಭಂಗಿ) : ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಮನಸ್ಸನ್ನು ಸಡಿಲಗೊಳಿಸುತ್ತದೆ. ಮೆದುಳನ್ನು ಶಾಂತಗೊಳಿಸುತ್ತದೆ. ನೀವು ಬೆನ್ನಿನ ಮೇಲೆ ಮಲಗಿ ನಿಮ್ಮ ಪಾದಗಳನ್ನು ನೆಲದ ಮೇಲೆ ಚಪ್ಪಟೆ ಮಾಡಿ ನಿಮ್ಮ ಕುತ್ತಿಗೆ ಮತ್ತು ನಿಮ್ಮ ತಲೆ ಚಾಪೆಯ ಮೇಲೆ ಚಪ್ಪಟೆಯಾಗಿರುವಂತೆ ನಿಮ್ಮ ದೇಹವನ್ನು ಮೇಲಕ್ಕೆತ್ತಿ. ನಿಮ್ಮ ಕೈಗಳನ್ನು ಬೆನ್ನಿನ ಕೆಳಗೆ ಇಡಬಹುದು.

*ಬಾಲಾಸನ (ಮಕ್ಕಳ ಭಂಗಿ) : ಇದು ಒತ್ತಡವನ್ನು ಕಡಿಮೆ ಮಾಡುತ್ತದೆ. ಇದು ಮನಸ್ಸನ್ನು ಶಾಂತಗೊಳಿಸುತ್ತದೆ. ಇದು ನರಮಂಡಲವನ್ನು ಶಾಂತಗೊಳಿಸುತ್ತದೆ. ನೋವನ್ನು ಕಡಿಮೆ ಮಾಡುತ್ತದೆ. ನೆಲದ ಮೇಲೆ ಮಂಡಿಯೂರಿ ಕುಳಿತುಕೊಳ್ಳಿ. ನಿಮ್ಮ ಮೊಣಕಾಲನ್ನು ಸೊಂಟಕ್ಕಿಂತ ಅಂಗಲವಾಗಿಸಿ ಮುಂದಕ್ಕೆ ಬಾಗಿ ನಿಮ್ಮ ತಲೆಯನ್ನು ನೆಲದ ಮೇಲೆ ಇರಿಸಿ. ಈ ಸ್ಥಾನದಲ್ಲಿ ಕೆಲವು ಸೆಕೆಂಡುಗಳ ಕಾಲ ಹಿಡಿದುಕೊಳ್ಳಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...