alex Certify ಕಾಲುಗಳಲ್ಲಿ ರಕ್ತದ ಹರಿವನ್ನು ಹೆಚ್ಚಿಸಲು ಈ ‘ಯೋಗಾಸನ’ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲುಗಳಲ್ಲಿ ರಕ್ತದ ಹರಿವನ್ನು ಹೆಚ್ಚಿಸಲು ಈ ‘ಯೋಗಾಸನ’ ಮಾಡಿ

ವೃದ್ಧಾಪ್ಯದಲ್ಲಿ ಕಾಲು ನೋವಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಏಕೆಂದರೆ ಈ ಸಮಯದಲ್ಲಿ ಕಾಲುಗಳಲ್ಲಿ ರಕ್ತ ಸಂಚಾರ ಕಡಿಮೆಯಾಗುತ್ತದೆ. ಇದರಿಂದ ನೋವು, ಊತ, ಸೆಳೆತ ಕಂಡುಬರುತ್ತದೆ. ಹಾಗಾಗಿ ನೀವು ಈ ಕಾಲು ನೋವಿನ ಸಮಸ್ಯೆಯಿಂದ ಮುಕ್ತಿ ಪಡೆಯಲು ಕಾಲುಗಳಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸಿ, ಅದಕ್ಕಾಗಿ ಈ ಯೋಗಾಸನ ಮಾಡಿ.

ಉತ್ಕಟಾಸನ : ಇದು ಕಾಲುಗಳಲ್ಲಿ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಹೊಟ್ಟೆ ಮತ್ತು ಬೆನ್ನಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದನ್ನು ಮಾಡಲು ನೀವು ನಿಂತುಕೊಂಡು ನಿಮ್ಮ ಕಾಲುಗಳು ಮತ್ತು ಸೊಂಟವನ್ನು ಅಗಲವಾಗಿಸಿ. ಅಂಗೈಗಳು ಪರಸ್ಪರ ಎದುರಾಗಿರುವಂತೆ ನಿಮ್ಮ ತೋಳುಗಳನ್ನು ಮೇಲಕ್ಕೆತ್ತಿ. ಎರಡು ಮೊಣಕಾಲುಗಳನ್ನು ಬಗ್ಗಿಸಿ ಮತ್ತು ಸಿಟ್ ಬ್ಯಾಕ್ ಸ್ಥಾನಕ್ಕೆ ಬನ್ನಿ. ಹಾಗೇ ಮಾಡುವಾಗ ನಿಮ್ಮ ಹಿಮ್ಮಡಿಯ ಮೇಲೆ ಹೆಚ್ಚಿನ ತೂಕವನ್ನು ಹಾಕಿ. ಇದನ್ನು 60 ಸೆಕೆಂಡುಗಳ ಕಾಲ ಮಾಡಿ.

ಹಸ್ತಪಾದಾಸನ : ಇದು ಕಾಲು ಮತ್ತು ಬೆನ್ನು ಮೂಳೆಗಳಿಗೆ ತುಂಬಾ ಒಳ್ಳೆಯದು. ಇದು ಕಾಲುಗಳಿಂದ ಹೃದಯಕ್ಕೆ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ನಿಮ್ಮ ಕಾಲುಗಳನ್ನು ಒಟ್ಟಿಗೆ ಸೇರಿಸಿ ನೇರವಾಗಿ ಇಟ್ಟು ನಿಮ್ಮ ಕೈಗಳನ್ನು 180 ಡಿಗ್ರಿ ರೇಖೆಯಲ್ಲಿ ಬಾಗಿಸಿ ಕಾಲ್ಬೆರಳುಗಳನ್ನು ಸ್ಪರ್ಶಿಸಿ. ನಿಮ್ಮ ಬೆನ್ನನ್ನು ನೇರವಾಗಿ ಇರಿಸಿ. ಈ ಸ್ಥಾನದಲ್ಲಿ ಕೆಲವು ಸೆಕೆಂಡುಗಳ ಕಾಲ ಹಿಡಿದಿಟ್ಟುಕೊಳ್ಳಿ. ಇದನ್ನು ದಿನಕ್ಕೆ 5 ಬಾರಿ ಮಾಡಿ.

ರಿವರ್ಸ್ ಭಂಗಿ : ಇದು ಕಾಲುಗಳಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ, ಹೃದಯದ ಕಾರ್ಯವನ್ನು ಸುಧಾರಿಸುತ್ತದೆ ಮತ್ತು ಹೃದಯವನ್ನು ಆರೋಗ್ಯವಾಗಿರಿಸುತ್ತದೆ. ಹಾಗಾಗಿ ಇದನ್ನು ಮಾಡಲು ನೆಲದ ಮೇಲೆ ಬೆನ್ನಿನ ಮೇಲೆ ಮಲಗಿಕೊಳ್ಳಿ. ನಿಧಾನವಾಗಿ ನಿಮ್ಮ ಕಾಲುಗಳನ್ನು ಗೋಡೆಯ ಮೇಲೆ ಇರಿಸಿ, ಸೊಂಟವನ್ನು 90 ಡಿಗ್ರಿ ಕೋನದಲ್ಲಿ ಇರಿಸಿ. ನಿಮ್ಮ ಮೊಣಕಾಲುಗಳನ್ನು ಸ್ವಲ್ಪ ಬಗ್ಗಿಸಿ ಮತ್ತು ಬೆನ್ನನ್ನು ನೆಲದ ಮೇಲೆ ಸಮತಟ್ಟಾಗಿ ಇರಿಸಿ. ನಿಮ್ಮ ಕೈಗಳನ್ನು ಸಮಾನಾಂತರವಾಗಿ ಇರಿಸಿ. ಒಂದು ನಿಮಿಷ ಈ ಸ್ಥಾನದಲ್ಲಿರಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...