ಬೆಂಗಳೂರು : ವೈಲ್ಡ್ ಕಾರ್ಡ್ ಮೂಲಕ ಕನ್ನಡ ಬಿಗ್ ಬಾಸ್ ಸೀಸನ್ 11 ಪ್ರವೇಶಿಸಿ ವಿನ್ನರ್ ಆದ ಹಾವೇರಿಯ ಹಳ್ಳಿ ಹೈದ ಹನುಮಂತ ಇತಿಹಾಸವನ್ನೇ ಸೃಷ್ಟಿಸಿದ್ದಾರೆ.
ನಾನು ಗೆಲ್ಲೋಕೆ ಬಂದಿಲ್ಲ, ಇರೋವಷ್ಟು ದಿನ ಜಾಲಿ ಮಾಡಿ ಖುಷಿಯಾಗಿರ್ತೀನಿ ಎಂದು ಹೇಳಿ ಜನರ ಮೆಚ್ಚುಗೆ ಗಳಿಸಿದ್ದ ಹನುಮಂತ ಕೊನೆಗೆ ಬಿಗ್ ಬಾಸ್ ವಿನ್ನರ್ ಪಟ್ಟ ಅಲಂಕರಿಸಿದ್ದಾರೆ.
ಸದ್ಯ, ಸೋಶಿಯಲ್ ಮೀಡಿಯಾದಲ್ಲಿ ಹನುಮಂತನ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ವೈರಲ್ ಆಗುತ್ತಿದೆ.
SSLC ಪರೀಕ್ಷೆಯಲ್ಲಿ 625 ಅಂಕಕ್ಕೆ 535 ಅಂಕ ಗಳಿಸಿ ಡಿಸ್ಟಿಂಕ್ಷನ್ ಪಡೆದಿರುವ ಹನುಮಂತನ ಟ್ಯಾಲೆಂಟ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.