ತಿರುಪತಿಯಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ವೈದ್ಯ ಮತ್ತು ಅವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ತಿರುಪತಿ ಜಿಲ್ಲೆಯ ರೇಣಿಗುಂಟಾ ಪ್ರದೇಶದಲ್ಲಿ ಭಾನುವಾರ ಬೆಳಗಿನ ಜಾವ 3 ರಿಂದ 4 ಗಂಟೆ ಸುಮಾರಿಗೆ ವೈದ್ಯರ ಮನೆಯ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ರೇಣಿಗುಂಟಾ ಪೊಲೀಸ್ ಇನ್ಸ್ ಪೆಕ್ಟರ್ ಆರೋಹನ್ ರಾವ್ ತಿಳಿಸಿದ್ದಾರೆ.
ನೆಲಮಹಡಿ ಹೊರರೋಗಿ ಚಿಕಿತ್ಸಾಲಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಟ್ಟಡದ ಮೊದಲ ಮತ್ತು ಎರಡನೇ ಮಹಡಿಯಲ್ಲಿ ವೈದ್ಯರ ಕುಟುಂಬ ವಾಸವಾಗಿತ್ತು. ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ವೇಳೆ ವೈದ್ಯರ ಪತ್ನಿ ಮತ್ತು ತಾಯಿಯನ್ನು ರಕ್ಷಿಸಲಾಗಿದೆ.
ಸುಟ್ಟ ಗಾಯಗಳ ನಂತರ ಡಾ.ರವಿ ಶಂಕರ್ ಸಾವನ್ನಪ್ಪಿದ್ದಾರೆ ಮತ್ತು ಅವರ ಇಬ್ಬರು ಮಕ್ಕಳಾದ 12 ವರ್ಷದ ಬಾಲಕ ಮತ್ತು 7 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಗೊತ್ತಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆ ವರದಿಗಾಗಿ ಕಳುಹಿಸಲಾಗಿದೆ.