alex Certify ಆಸ್ಪತ್ರೆಯಲ್ಲೇ ಮದ್ಯದ ಅಮಲಲ್ಲಿ ಮಹಿಳಾ ರೋಗಿ ಥಳಿಸಿದ ಡಾಕ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಲ್ಲೇ ಮದ್ಯದ ಅಮಲಲ್ಲಿ ಮಹಿಳಾ ರೋಗಿ ಥಳಿಸಿದ ಡಾಕ್ಟರ್

ಕೊರ್ಬಾ(ಛತ್ತೀಸ್‌ಗಢ): ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮದ್ಯದ ಅಮಲಿನಲ್ಲಿ ವೈದ್ಯರೊಬ್ಬರು ಮಹಿಳಾ ರೋಗಿಗೆ ಥಳಿಸಿದ್ದಾರೆ.

ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ವೈದ್ಯರ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ತಡರಾತ್ರಿ ತಾಯಿ ಸುಖಮತಿ ಅವರ ಆರೋಗ್ಯ ಹದಗೆಟ್ಟಿದ್ದರಿಂದ 108 ಮತ್ತು 112ಕ್ಕೆ ಕರೆ ಮಾಡಿದರೂ ಸಮಯಕ್ಕೆ ಸರಿಯಾಗಿ ಸ್ಪಂದಿಸಲಿಲ್ಲ. ಆಕೆಯ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಕಂಡ ಕೂಡಲೇ ಆಟೋ ರಿಕ್ಷಾದಲ್ಲಿ ಆಕೆಯನ್ನು ಆಸ್ಪತ್ರೆಗೆ ಕರೆತಂದರು. ಚಿಕಿತ್ಸೆ ವೇಳೆ ವೈದ್ಯರು ತಾಯಿಗೆ ಥಳಿಸಿದ್ದಾರೆ. ಈ ಬಗ್ಗೆ ಆಕ್ಷೇಪಿಸಿದಾಗ ಸುಮ್ಮನಿರಲು ಹೇಳಿದ್ದರು ಎಂದು ರೋಗಿಯ ಮಗ ಗೇರ್ವಾನಿ ಗ್ರಾಮದ ನಿವಾಸಿ ಶ್ಯಾಮ್ ಕುಮಾರ್ ಹೇಳಿದ್ದಾರೆ.

ಮದ್ಯದ ಅಮಲಿನಲ್ಲಿ ರೋಗಿಯನ್ನು ಥಳಿಸಿದ ವೈದ್ಯನ ವಿರುದ್ಧ ಆಸ್ಪತ್ರೆ ಆಡಳಿತ ಮಂಡಳಿ ಕ್ರಮ ಕೈಗೊಂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...