alex Certify ವೈದ್ಯನ ಮೇಲೆ ದುಷ್ಕರ್ಮಿಗಳ ದಾಳಿ, ಮಚ್ಚಿನಿಂದ ಮಾರಣಾಂತಿಕ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯನ ಮೇಲೆ ದುಷ್ಕರ್ಮಿಗಳ ದಾಳಿ, ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಖಾಸಗಿ ಆಸ್ಪತ್ರೆ ವೈದ್ಯನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ವೈದ್ಯನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಾ. ದೀಪಕ್ ಹಲ್ಲೆಗೊಳಗಾದವರು ಎಂದು ಹೇಳಲಾಗಿದೆ. ಕ್ಲಿನಿಕ್ ನಿಂದ ಮನೆಗೆ ತೆರಳುತ್ತಿದ್ದ ಅವರ ಮೇಲೆ ಪೋಲಿಸ್ ಠಾಣೆ ಮತ್ತು ಅಗ್ನಿಶಾಮಕ ದಳದ ಕಚೇರಿ ಸಮೀಪ ದಾಳಿ ಮಾಡಿದ ದುಷ್ಕರ್ಮಿಗಳು ಮಚ್ಚಿನಿಂದ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತರೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...