alex Certify ವೈದ್ಯರ ಮೇಲೆ ಹಲ್ಲೆ ನಡೆಸಿದ್ರೆ 5 ವರ್ಷ ಜೈಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯರ ಮೇಲೆ ಹಲ್ಲೆ ನಡೆಸಿದ್ರೆ 5 ವರ್ಷ ಜೈಲು

ನವದೆಹಲಿ: ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಸಾಂಕ್ರಾಮಿಕ ರೋಗ ಕಾಯ್ದೆಯಡಿ ಕೇಸು ದಾಖಲಿಸಲಾಗುತ್ತದೆ. 5 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ರಾಜ್ಯಗಳಿಗೆ ಈ ಕುರಿತಾಗಿ ಸೂಚನೆ ನೀಡಿದ್ದು, ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಸಾಂಕ್ರಾಮಿಕ ರೋಗಗಳ ತಿದ್ದುಪಡಿ ಕಾಯ್ದೆ 2020 ರ ಅಡಿಯಲ್ಲಿ ಕಠಿಣ ಕ್ರಮಕೈಗೊಳ್ಳಬೇಕೆಂದು ಕೇಂದ್ರದಿಂದ ಸೂಚನೆ ನೀಡಿದ್ದು ಈ ಕಾಯ್ದೆಯಡಿ ದೋಷಿಗಳಾದರೆ ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ದೇಶದ ಹಲವೆಡೆ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ ವರದಿಯಾಗಿವೆ. ಈ ಕುರಿತಂತೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದ್ದು, ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲಿನ ಹಲ್ಲೆ ತಡೆಗೆ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...