alex Certify ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಆರೋಪ: ಆಸ್ಪತ್ರೆ ಎದುರು ಪೋಷಕರ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಆರೋಪ: ಆಸ್ಪತ್ರೆ ಎದುರು ಪೋಷಕರ ಪ್ರತಿಭಟನೆ

ಶಿವಮೊಗ್ಗ: ವೈದ್ಯರ ನಿರ್ಲಕ್ಷ್ಯದಿಂದ 14 ತಿಂಗಳ ಮಗು ಸಾವು ಕಂಡಿದೆ ಎಂದು ಆರೋಪಿಸಿ ಶಿವಮೊಗ್ಗದ ಖಾಸಗಿ ಆಸ್ಪತ್ರೆ ಎದುರು ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

ಆಸ್ಪತ್ರೆಗೆ ದಾಖಲಿಸಿದ್ದ ಭದ್ರಾವತಿ ನಿವಾಸಿ ದೃವೀಶ್ ಮೃತಪಟ್ಟಿದ್ದು, ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ಮುಂದೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...