
ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗಾಯಾಳುಗಳ ಸೋಗಿನಲ್ಲಿ ಬಂದು ಗುಂಡಿಕ್ಕಿ ವೈದ್ಯನನ್ನು ಕೊಂದಿದ್ದಾರೆ.
ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯ ಜಾವೇದ್ ಮೃತಪಟ್ಟವರು ಎಂದು ಹೇಳಲಾಗಿದೆ. ವೈದ್ಯಕೀಯ ವಿಚಾರಣೆಗಾಗಿ ಬಂದಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಗಾಯಕ್ಕೆ ಚಿಕಿತ್ಸೆ ನೀಡಿದ ನಂತರ ಇಬ್ಬರು ದಾಳಿಕೋರರು ವೈದ್ಯರನ್ನು ಭೇಟಿಯಾಗಲು ಒತ್ತಾಯಿಸಿದ್ದಾರೆ.
ಘಟನೆಯ ಕುರಿತು ಮಾತನಾಡಿದ ಆಸ್ಪತ್ರೆ ಸಿಬ್ಬಂದಿ, ಇಬ್ಬರು ಪುರುಷರು ಗಾಯಗೊಂಡು ಆಸ್ಪತ್ರೆಗೆ ಬಂದಿದ್ದಾರೆ. ಚಿಕಿತ್ಸೆ ಪಡೆದ ನಂತರ ಅವರು ವೈದ್ಯರನ್ನು ಭೇಟಿಯಾಗಲು ಒತ್ತಾಯಿಸಿದರು. ವೈದ್ಯರ ಕ್ಯಾಬಿನ್‌ಗೆ ಪ್ರವೇಶಿಸಿ ನಂತರ ಅವರನ್ನು ಗುಂಡಿಕ್ಕಿ ಕೊಂದರು ಎಂದು ತಿಳಿಸಿದ್ದಾರೆ. ದೆಹಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.