alex Certify ಆಸ್ಪತ್ರೆಯಲ್ಲೇ ತಾಯಿ ಸೀರೆಯಲ್ಲಿ ನೇಣು ಹಾಕಿಕೊಂಡು ವೈದ್ಯ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಲ್ಲೇ ತಾಯಿ ಸೀರೆಯಲ್ಲಿ ನೇಣು ಹಾಕಿಕೊಂಡು ವೈದ್ಯ ಆತ್ಮಹತ್ಯೆ

ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ತಜ್ಞರಾಗಿದ್ದ ಡಾ.ಎಸ್. ರೇಣುಕಾನಂದ(43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಮಕ್ಕಳ ತಜ್ಞರಾಗಿದ್ದರು. ಅನಾರೋಗ್ಯದಿಂದ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಸೀರೆಯಲ್ಲಿ ರೇಣುಕಾನಂದ ನೇಣು ಹಾಕಿಕೊಂಡಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಡ್ಯೂಟಿ ರೂಮ್ ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದು, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶವ ಸ್ಥಳಾಂತರ ಮಾಡಲಾಗಿದೆ. ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...