
ಬಳ್ಳಾರಿ: ವೈದ್ಯ ಮಹಾಶಯನೊಬ್ಬ ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದನಲ್ಲದೇ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಹಗೂ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಈರಣ್ಣ ಅಮಾನತುಗೊಂಡವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈರಣ್ಣ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ವೈದ್ಯ ಈರಣ್ಣ ಮದ್ಯಪಾನ ಮಾಡಿಬಂದು ಆಸ್ಪತ್ರೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಹಾಗೂ ದುರ್ನಡತೆ ಆಧಾರದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ವೈದ್ಯನನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.